Kannada Rajyotsava 2022 : ಕನ್ನಡ ರಾಜ್ಯೋತ್ಸವದ ಬಗ್ಗೆ ನಿಮಗೆಷ್ಟು ಗೊತ್ತು ?
ಅಲ್ಲಲ್ಲಿ ಚದುರಿ ಹೋಗಿರುವ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಒಟ್ಟುಗೂಡಿಸಿ ಒಂದು ರಾಜ್ಯವನ್ನಾಗಿ ಘೋಷಣೆ ಮಾಡಿದ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ಕರ್ನಾಟಕ ರಾಜ್ಯದಲ್ಲಿ 67ನೇ ವರ್ಷದ ಕನ್ನಡ ರಾಜ್ಯೋತ್ಸವ(Kannada Rajyotsava 2022) ಆಚರಣೆಗೆ ದಿನಗಣನೆ ಶುರುವಾಗಿದೆ.ನಾಡಹಬ್ಬವನ್ನು ಪ್ರತಿವರ್ಷ ನವೆಂಬರ್ 1ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು 1956ರ ನವೆಂಬರ್ 1ರಂದು ರೂಪುಗೊಂಡ ಸಂಕೇತವಾಗಿ ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವನ್ನು ಆಚರಿಸಲಾಗುತ್ತದೆ.ಅಲ್ಲಲ್ಲಿ ಚದುರಿ ಹೋಗಿರುವ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಒಟ್ಟುಗೂಡಿಸಿ ಒಂದು ರಾಜ್ಯವನ್ನಾಗಿ ಘೋಷಣೆ ಮಾಡಿದ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ಕನ್ನಡ ರಾಜ್ಯೋತ್ಸವವನ್ನು ವಿಶ್ವದಾದ್ಯಂತ ಕನ್ನಡಿಗರು ನಮ್ಮ ನಾಡು ನುಡಿ ಮೆರೆಯುವುದರ ಮೂಲಕ ಸಂಭ್ರಮದಿಂದ ಆಚರಿಸುತ್ತಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸರಕಾರದಿಂದ ರಾಜ್ಯೋತ್ಸವದ ಪ್ರಶಸ್ತಿ ಪ್ರದಾನವನ್ನು ಕೂಡ ಮಾಡಲಾಗುತ್ತದೆ. ಕನ್ನಡದ ಕುಲಪುರೋಹಿತ ಎಂದೇ ಖ್ಯಾತಿಯಾದ ಆಲೂರು ವೆಂಕಟರಾಯರು 1904ರಲ್ಲಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಹುಟ್ಟು ಹಾಕಿದ್ದರು. ಭಾರತವು ಗಣರಾಜ್ಯವಾದ ನಂತರದ ದಿನಗಳಲ್ಲಿ ದೇಶದಲ್ಲಿನ ವಿವಿಧ ಪ್ರಾಂತ್ಯಗಳು ಅಲ್ಲಿನ ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ